ಶಾಸಕ ರಾಜು ಸೇಠ್, ಹಾಗೂ ಮಾಜಿ ಶಾಸಕ ಫಿರೋಜ್ ಸೇಠ್ ನೇತೃತ್ವದಲ್ಲಿ ಈದ್ ಮಿಲಾದ್ ನಿಮಿತ್ತ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಸುಮಾರು 400 ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಪ್ರವಾದಿ ಮಹಮ್ಮದ್ ಅವರ ಜನ್ಮದಿನದ ನಿಮಿತ್ತ ಬೆಳಗಾವಿ ಶಾಸಕ ರಾಜು ಸೇಠ್, ಹಾಗೂ ಮಾಜಿ ಶಾಸಕ ಫಿರೋಜ್ ಸೇಠ್ ನೇತೃತ್ವದಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ರಾಜು ಸೇಠ್ ಅವರು ಎಲ್ಲರಿಗೂ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಅಬ್ದುಲ್ ಖಾದರ್ ಘಿವಾಲೆ, ರಫೀಕ ಅಂಕಲಗಿ, ಅಬ್ದುಲ್ ಗಫೂರ್ ಘೀವಾಲೆ, ಜಹೀರ ಸನದಿ, ರಶೀದ್ ಮನಿಯಾರ, ಮತ್ತಿತರರು ಉಪಸ್ಥಿತರಿದ್ದರು.