Belagavi

ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ

Share

ಬೆಳಗಾವಿ: ತಾಲೂಕಿನ ಮಂಡೋಳಿ ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸಲು ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 1.50ಕೋಟಿ ರೂ. ಬಿಡುಗಡೆಯಾಗಿದ್ದು ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಯಿತು.

ಗ್ರಾಮದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯರು, ಪಿಡಿಒ ಜ್ಯೋತಿ ಮೇಟಿ, ಲಕ್ಷ್ಮೀ ರಾಜು ಸುತಾರ, ಲಕ್ಷ್ಮೀ ಕಣಬರಕರ್, ಕೇದಾರಿ ಕಣಬರಕರ್ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸರ್ವಸದಸ್ಯರು ಉಪಸ್ಥಿತರಿದ್ದರು.

Tags: