Uncategorized

ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ ಧಾರವಾಡ ನಗರ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಗೌರಮ್ಮ ಬಲೋಗಿ

Share

ಧಾರವಾಡದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮತ್ತು ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡಲು ಧಾರವಾಡ ನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಲೋಗಿ ಅವರು ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ಪುಪ್ಪ ಗುಚ್ಛ ನೀಡಿ ಮಾರ್ಗದರ್ಶನ ಪಡೆದುಕೊಂಡರು

ಹೌದು ಮುಂಬರುವ ಲೋಕಸಭಾ ಚುನಾವಣೆಗೆ ಮಹಿಳಾ ಕಾಂಗ್ರೆಸ್ ನ್ನು ಬಲಿಷ್ಠ ಪಡಿಸಲು ಸಜ್ಜಾಗಲು ಗೌರಮ್ಮ ಬಲೋಗಿ ಅವರನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಜವಾಬ್ದಾರಿಯನ್ನು ನೀಡಿದ್ದಾರೆ ಸಂಘಟನಾತ್ಮಕ ಚತುರ ಎಂದೇ ಖ್ಯಾತಿ ಪಡೆದಿರುವ ಗೌರಮ್ಮ ಬಲೋಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿಷ್ಠೆಯಿಂದ ಶ್ರಮಿಸಿದರು ಇತ್ತಿಚಿಗಷ್ಟೆ ತೆಲಂಗಾಣ ರಾಜ್ಯದ ಚುನಾವಣೆಗೆ ವಿಕ್ಷಕಿಯಾಗಿಯೂ ನೇಮಕಗೊಂಡರು ಅಲ್ಲಿನ ವಿಧಾನಸಭಾ ಚುನಾವಣೆಯಲ್ಲಿ ನೀಡಿದ ಜವಾಬ್ದಾರಿಯನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸಿದ್ದರು

ಅಲ್ತಾಫ್ ‌ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags: