Belagavi

ಡಿ.4ರಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಉದ್ಘಾಟನ : ಜಿಲ್ಲಾಧ್ಯಕ್ಷ ಬಸಪ್ಪ ತಳವಾರ

Share

ಶುಕ್ರವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರವಿವಾರ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಉದ್ಘಾಟಕರಾಗಿ ಆಗಮಿಸುವರು.

ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜ್ಯೋತಿ ಬೆಳಗಿಸುವರು. ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ತಳವಾರ ಅಧ್ಯಕ್ಷತೆ ವಹಿಸುವರು. ವಿಶೇಷ ಆಮಂತ್ರಿತರಾಗಿ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಣ್ಣ ಎನ್.ಕೆ, ಮುಖ್ಯ ಅತಿಥಿಗಳಾಗಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಜಿಲ್ಲೆಯ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಗೌರವ ಅಧ್ಯಕ್ಷ ನಾಗಪ್ಪ ಕಳಸನ್ನವರ
ಉಪಾಧ್ಯಕ್ಷ ವಿರೂಪಾಕ್ಷ ತಿಳಗಂಜಿ, ದಯಾನಂದ ಢಾಳಿ,

 

ರಮೇಶ ಚೌಗುಲಾ, ಪ್ರಧಾನ ಕಾರ್ಯದರ್ಶಿ ಜಗದೀಶ ಪೂಜೇರಿ, ಕಾರ್ಯದರ್ಶಿ ಶಿವಬಸಪ್ಪ ಕಾಡನ್ನವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: