farmers

ವಿಜಯಪುರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸಂಘದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

Share

ವಿಜಯಪುರ   ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರದ ಈಡೇರಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯ ಪೂಜಾರ ಹೇಳಿದರು. ವಿಜಯಪುರ ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಸಂಕಷ್ಟದಲ್ಲಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತವಾದ ನೈಜ ಬೆಲೆ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ವಿದ್ಯುತ್ ಖಾಸಗೀಕರಣ ಬಿಲ್ಲನ್ನು ಕೈ ಬಿಡಬೇಕು. ಅಲ್ಲದೇ, ರೈತರ 10 ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರಾಜ್ಯದ ರೈತರು ತೊಂದರೆ ಎದುರಿಸುತ್ತಿದ್ದು, ಆದ್ರೂ, ಕೇಂದ್ರ ಸರ್ಕಾರ ಮಾತ್ರ ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ.

 

ಈ ಕಾರಣಕ್ಕೆ ಡಿಸೆಂಬರ್ 5 ರಂದು ವಿಜಯಪುರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸಂಘದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

Tags: