Uncategorized

ಮಾಜಿ‌ MLC ಹಾಗೂ ಕಾಳಿದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್. ಎ. ಜಿದ್ದಿ ನಿಧನ

Share

ಮಾಜಿ‌ ವಿಧಾನ ಪರಿಷತ್ ಸದಸ್ಯ ಎಸ್. ಎ. ಜಿದ್ದಿ ನಿಧನ ರಾಗಿದ್ದಾರೆ‌. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ವಿಜಯಪುರ ನಗರದ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿದ್ದ ಎಸ್. ಎ. ಜಿದ್ದಿ ಅವರಿಗೆ 87 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಪುತ್ರಿಯರಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯಲ್ಲಿ ಇರಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಕಾಳಿದಾಸ ಶಿಕ್ಷಣ ಸಂಸ್ಥೆ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Tags: