Belagavi

ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭ

Share

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರದ ಪಾರ್ವತಿ ಕಾಲೋನಿಯ ರಸ್ತೆಗಳ ಅಭಿವೃದ್ಧಿ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಜೂರಾತಿ ಕೊಡಿಸಿದ್ದು, ಅವರ  ಅನುಪಸ್ಥಿತಿಯಲ್ಲಿ ಗ್ರಾಮಸ್ಥರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿ ಭೂಮಿ ಭೂಮಿಪೂಜೆ  ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಮಯದಲ್ಲಿ ಗ್ರಾಮದ ಹಿರಿಯ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಮನೋಹರ ಬೆಳಗಾಂವ್ಕರ, ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags: