Banglore

ಹಳ್ಳಿ ಹಕ್ಕಿ ಖ್ಯಾತಿಯ ಮಾಜಿ ಸಚಿವ ಎಚ್.ವಿಶ್ವನಾಥ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿ

Share

ರಾಜ್ಯದಲ್ಲಿದ್ದ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪಥನಗೊಳಿಸಿ ಬಿಜೆಪಿ ಸರಕಾರ ರಚನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಳ್ಳಿ ಹಕ್ಕಿ ಖ್ಯಾತಿಯ ಮಾಜಿ ಸಚಿವ ಎಚ್.ವಿಶ್ವನಾಥ ಬೆಂಗಳೂರಿನಲ್ಲಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭೇಟಿಯಾಗಿರುವುದು ಕಾಂಗ್ರೆಸ್ ಸೇರ್ಪಡೆ ಮುನ್ಸೂಚನೆಯಾ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.

V0-ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ರಣಕಣ ಸಿದ್ದವಾಗುತ್ತಿರುವ ಬೆನ್ನಲ್ಲೇ ಮಾಜಿ ಸಚಿವ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿರುವ ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅವರು ಭೇಟಿ ಮಾಡಿದರು. ಇತ್ತೀಚಿಗೆ ವಿಶ್ವನಾಥ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆಯಾಗುವುದಾಗಿ ಇಂಗಿತ ವ್ಯಕ್ತಪಡಿಸಿದ್ದರಂತೆ. ಈ ಸಂದರ್ಭದಲ್ಲಿ ಖರ್ಗೆ ಅವರು ರಾಜ್ಯ ನಾಯಕರನ್ನು ಭೇಟಿ ಮಾಡಿ ಬನ್ನಿ ಎನ್ನುವ ಸಲಹೆ ನೀಡಿದ್ದರು ಎನ್ನಲಾಗಿದೆ.

ಇದರ ನಡುವೆ ಇಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಭೇಟಿಯಾಗಿ ಮುಂದಿನ ರಾಜಕೀಯದ ಬಗ್ಗೆ ಚರ್ಚೆ ನಡೆಸಿ ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ..

Tags: