Uncategorized

ಬೆಳ್ಳಂಬೆಳಗ್ಗೆ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

Share

ರಾಮನಗರ: ಬೆಳ್ಳಂಬೆಳಗ್ಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ನಡೆದಿದೆ. ಹಿಂಬದಿಯಿಂದ ಓಮ್ನಿ ಕಾರು ಲಾರಿಗೆ (Omni- Lorry Accident) ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

ಬೆಂಗಳೂರಿನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಓಮ್ನಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಓಮ್ನಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುದ್ದಿದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಹಿನ್ನೆಲೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

Tags:

Horrible accident on Dashpath highway in the wee hours of the morning - four died on the spot