Belagavi

ಚಳಿಗಾಲದ ಅಧಿವೇಶನದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಆಸಕ್ತಿಯಿಲ್ಲ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.

Share

ಕಾಂಗ್ರೆಸ್ ರಸ್ತೆಯ ರಸ್ತೆ ಬದಿಯ ಮರಗಳ ಮೇಲೆ ಚಿತ್ರಗಳನ್ನು ಬಿಡಿಸುವ ಮೂಲಕ ಸಾಮಾಜಿಕ ಸಂದೇಶ ಉಪಕ್ರಮಕ್ಕೆ ಚಾಲನೆ ನೀಡಿ ಪತ್ರಕರ್ತರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಯಾವುದೇ ಹುದ್ದೆಗಳ ಮೇಲೆ ಆಸಕ್ತಿಯಿಲ್ಲ ಎಂದರು.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನಿಮಗೆ ಉಪಸಭಾಪತಿ ಸ್ಥಾನ ನೀಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಧಾನಸಭೆ ಉಪಸಭಾಪತಿ ಹುದ್ದೆಯ ಕುರಿತು ಆಸಕ್ತಿಯಿಲ್ಲ. ಇದು ಗಾಳಿ ಸುದ್ದಿ ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಏಕೆ ಆಹ್ವಾನಿಸಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಕೈಬಿಡಲಾಗುತ್ತಿದೆಯೇ? ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಪಕ್ಷದಲ್ಲಿ ಅವರ ಸ್ಥಾನ ಉನ್ನತವಾಗಿದೆ. ಅವರು ಬಿಜೆಪಿ ಪಕ್ಷದ ಅತ್ಯುತ್ತಮ ನಾಯಕರಾಗಿದ್ದಾರೆ ಎಂದು ಶಾಸಕ ಅಭಯ ಪಾಟೀಲ ಶ್ಲಾಘಿಸಿದರು. ಜೊತೆಗೆ ನಗರದಲ್ಲಿ ನಡೆಯುತ್ತಿರುವ ಸುಂದರೀಕರಣದ ಜೊತೆಗೆ ನಾನಾ ರಾಜಕೀಯ ಅಂಶಗಳ ಕುರಿತು ಮಾಹಿತಿ ನೀಡಿದರು.

Tags: