Uncategorized

ಕ್ಷುಲ್ಲಕ ಕಾರಣಕ್ಕೆ ಕುಡುಗೋಲಿನಿಂದ ಇರಿದು ಕೊಲೆ

Share

ಸಣ್ಣಪುಟ್ಟ ಜಗಳಕ್ಕೆ ಹರಿತವಾದ ಕುಡುಗೋಲಿನಿಂದ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ 1:30ರ ಸುಮಾರಿಗೆ ಗೊಜಗಾ ಗ್ರಾಮದಲ್ಲಿ ನಡೆದಿದೆ.

ರಾಜು ಬಂಡು ನಾಯ್ಕ್ (ವಯಸ್ಸು 32) ಮತ್ತು ಮಾರುತಿ ನಾಯ್ಕ್ (ವಯಸ್ಸು 32) ಎಂಬುವರ ನಡುವೆ ನಿತ್ಯ ಜಗಳ ನಡೆಯುತ್ತಿತ್ತು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾಗ್ವಾದ ನಡೆಯುತ್ತಿದ್ದಾಗ ರಾಜು ಹರಿತವಾದ ಕುಡುಗೋಲಿನಿಂದ ಮಾರುತಿಯ ಹೊಟ್ಟೆಗೆ ಇರಿದಿದ್ದಾನೆ. ಇದರಿಂದ ಮಾರುತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರುತಿಯನ್ನು ದ್ವಿಚಕ್ರ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾರುತಿ ನಾಯ್ಕನ ಕುಟುಂಬದವರು ಮಾಹಿತಿ ನೀಡಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಮಾರುತಿ ನಾಯ್ಕ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಗ್ರಾಮದ ಯುವಕರು ಜಿಲ್ಲಾಸ್ಪತ್ರೆ ಎದುರು ಜಮಾಯಿಸಿದ್ದರು. ಪೊಲೀಸರು ಕೊಲೆಯ ತನಿಖೆ ನಡೆಸುತ್ತಿದ್ದಾರೆ.

Tags:

Killed by sickle stabbing for a trivial reason