Uncategorized

ಕುಂಬಾರ ಸಮುದಾಯಕ್ಕೆ ನ್ಯಾಯ ಸಿಗುವ ಕಾರ್ಯ ಆಗಲಿ..

Share

ಕುಂಬಾರ ಸಮುದಾಯದ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಈ ಬಾರಿಯ ರಾಜ್ಯ ಬಜೆಟ್ಟಿನಲ್ಲಿ ಕುಂಬಾರ ಸಮುದಾಯದ ನಿಗಮವನ್ನು ಪ್ರತ್ಯೇಕಿಸಿ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ಬೆಳಗಾವಿ ಜಿಲ್ಲಾ ಕುಂಬಾರ ಸಮಾಜದ ವತಿಯಿಂದ ಆಗ್ರಹಿಸಲಾಯಿತು.

ರವಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುಂಬಾರ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ್ ವೈದ್ಯ ಅವರು ಮಾತನಾಡಿ, ಸಮಾಜದ ವತಿಯಿಂದ ಇರುವ ಅನೇಕ ಬೇಡಿಕೆಗಳ ಕುರಿತಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕುಂಬಾರ ಸಮುದಾಯವು 15 ರಿಂದ 20 ಲಕ್ಷ ಹೆಚ್ಚಿನ ಜನಸಂಖ್ಯೆ ಹೊಂದಿದ್ದು ಈವರೆಗೂ ಆಡಳಿತ ನಡೆಸಿದ ಯಾವುದೇ ಸರ್ಕಾರ ನಮ್ಮ ಸಮುದಾಯ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಕಾರಣಗಳಿಂದ ನಮ್ಮ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದ್ದು ಸಂವಿಧಾನಿಕವಾಗಿ ದೊರೆಯಬೇಕಾದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಹೀಗಾಗಿ ಸರ್ಕಾರ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಪ್ರತ್ಯೇಕಿಸಿ ಅಗತ್ಯ ಕ್ರಮ ಕೈಗೊಂಡು ಕನಿಷ್ಠ 100 ಕೋಟಿ ರೂಪಾಯಿ ಅನುದಾನ ಒದಗಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ..

ಈ ಸಂದರ್ಭದಲ್ಲಿ ಕರ್ನಾಟಕ ಕುಂಬಾರ ಯುವ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರಾದ ನಿಂಗಪ್ಪ ಕುಂಬಾರ ಕರ್ನಾಟಕ ಪ್ರದೇಶ ಕುಂಬಾರ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸುರೇಶ್ ವೈದ್ಯ, ರಮೇಶ ಕುಂಬಾರ, ಸಂತೋಷ್ ಕುಂಬಾರ, ನಿಂಗಪ್ಪ ಕುಂಬಾರ ಆಯ ಎಸ್ ಕುಂಬಾರ, ಸಿ ಬಿ ಎಡಿಯೂರು, ಅಣ್ಣಪ್ಪ ಕುಂಬಾರ, ಶಿವಾನಂದ ಕುಂಬಾರ, ಜಯಶ್ರೀ ಕುಂಬಾರ ಸುಶೀಲಾ ಪೂಜಾರಿ ಬಸವರಾಜ ಕುಂಬಾರ, ಇನ್ನುಳಿದ ಸಮಾಜದ ಮುಖಂಡರು ಉಪಸ್ಥಿತರಿದ್ದರು..

Tags: