ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧಿನಾಯಕಿಯಾದ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆಯ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ
ಹಿನ್ನೆಲೆಯಲ್ಲಿ ಇವತ್ತು ನವದೆಹಲಿಯ ಮಲ್ಲಿಕಾರ್ಜುನ ಖರ್ಗೆಯವರ ನಿವಾಸಕ್ಕೆ ತೆರಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಭಿನಂದಿಸಿದರು.
ಇದೇ ವೇಳೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಮಾರ್ಗದರ್ಶನ ನೀಡಿದ ಮಲ್ಲಿಕಾರ್ಜುನ ಖರ್ಗೆ, ಅವರ ರಾಜಕೀಯ ಜೀವನ ಉಜ್ವಲವಾಗಲೆಂದು ಶುಭ ಹಾರೈಸಿದರು.