ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಆಮೇಲೆ ಯೋಚಿಸಬಹುದು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಪಕ್ಷದ ಮುಖಂಡ ಬಿ.ಸಿ.ಪಾಟೀಲಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ವಿಜಯಪುರ ನಗರ ಕ್ಷೇತ್ರದ ಸ್ವಪಕೀಯ ಶಾಸಕ ಯತ್ನಾಳ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ವಿರುದ್ಧ ಮಾಜಿ ಸಚಿವ ಬಿ ಸಿ ಪಾಟೀಲ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿ ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿಕೆ ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು ಅಂತ ನನ್ನ ಭಾವನೆ ಎಂದು ಟ್ವೀಟ್‌ನ್ನು ಮಾಜಿ ಸಚಿವ ಬಿ.ಸಿ.ಪಾಟೀಲ ಮಾಡಿದ್ದರು. ಇದಕ್ಕೆ ಟ್ವೀಟ್ ಮೂಲಕವೇ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟು ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಆಮೇಲೆ ಯೋಚಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.
Uncategorized
ಸ್ವಪಕ್ಷೀಯ ಮಾಜಿ ಸಚಿವರಿಗೆ ತೀಕ್ಷ್ಣವಾಗಿ ಉತ್ತರಿಸಿದ ಶಾಸಕ ಯತ್ನಾಳ
