Kalaburgi

ಎಐಸಿಸಿ ಅಧ್ಯಕ್ಷರಾದ ಬಳಿಕ ಖರ್ಗೆ ಅವರಿಗೆ ಪ್ರಥಮ ಬಾರಿಗೆ ಕಲಬುರ್ಗಿಯಲ್ಲಿ ಭವ್ಯ ಸ್ವಾಗತ ದೊರೆಯಿತು

Share

ಸ್ವಾಭಿಮಾನಿ ಕನ್ನಡಿಗ ಕಲ್ಯಾಣ ಕರ್ನಾಟಕದ ಹರಿಕಾರ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಹಮ್ಮಿಕೊಂಡ ಬೃಹತ್ ಅಭಿನಂದನಾ ಸಮಾರಂಭ ಮತ್ತು ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

 

ಬ್ಲಾಕ್ ಕಾಂಗ್ರೆಸ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಏರಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಸಾಧನೆಯಿಂದ ಕರ್ನಾಟಕ ಕಾಂಗ್ರೆಸ್ ಘಟಕಕ್ಕೆ ಸಂತೋಷವಾಗಿದೆ.
ಹಲವು ಖಾತೆಗಳನ್ನು ಖರ್ಗೆಯವರು ಬದ್ಧತೆಯಿಂದ ನಿರ್ವಹಿಸಿದ್ದಾರೆ. ನಮ್ಮ ನಾಡಿನ ಹೆಮ್ಮೆಯ ನಾಯಕರಾದ ಖರ್ಗೆ ಅವರ ನೇತೃತ್ವದಲ್ಲಿ 2023ರಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಎಲ್ಲರೂ ಪಣತೋಟ್ಟು ಕೆಲಸ ಮಾಡೋಣ. ರಾಜ್ಯದಲ್ಲಿ ಜನರು ಬದಲಾವಣೆ ಬಯಸಿದ್ದು ಜನರ ಆಶೀರ್ವಾದ ಕಾಂಗ್ರೆಸ್ ಪಕ್ಷದ ಮೇಲೆ ಇದೆ. ಹೀಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟರು

ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ, sಚಿಣish ರಿಚಿಡಿಞihoಟಟi ಎಂ.ಬಿ.ಪಾಟೀಲ, ಕಾರ್ಯಧ್ಯಕ್ಷರುಗಳಾದ ಸಲೀಂ ಅಹ್ಮದ್, ಆರ್. ದ್ರುವನಾರಾಯಣ, ಈಶ್ವರ ಖಂಡ್ರೆ ಸೇರಿ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಇದ್ದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ಬಾರಿಗೆ ಇಂದು ಕಲ್ಬುರ್ಗಿಗೆ ಆಗಮಿಸಿದರು. ತವರು ನೆಲದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ನಡೆದ ಪಕ್ಷದ ಮಹಾಸಭೆಯಲ್ಲಿ ಖರ್ಗೆ ಅವರೊಂದಿಗೆ ಕಾಂಗ್ರೆಸ್ ಮುಖಂಡರು ರಾಜ್ಯ ಮತ್ತು ದೇಶದ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಪಕ್ಷದ ಕಾರ್ಯಕರ್ತರು ಮತ್ತು ಜನರಿಗೆ ಮನವಿ ಮಾಡಿದರು.

Tags: