Uncategorized

ನಾಲ್ಕು ಬೈಕ್ ಕಳ್ಳರನ್ನು ಬಂಧಿಸಿ 16 ಲಕ್ಷದ 37 ಬೈಕ್ ವಶಕ್ಕೆ ಪಡೆದ ಪೊಲೀಸರು

Share

ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸರು ನಾಲ್ಕು ಜನ ಬೈಕ್ ಕಳ್ಳರನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಬೈಕ್‌ಗಳು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಎಸ್ಪಿ ಋಷಿಕೇಸ್ ಸೋನವಾಣೆ ಹೇಳಿಕೆ ನೀಡಿದ್ದು ಬಸವರಾಜ ಹುಣಸಿಗಿಡದ, ಹುಲುಗಪ್ಪ ಕೂಕಲೋರ, ಕೊಂಡಯ್ಯ ಪಾರ್ವತಿದೊಡ್ಡಿ, ರವಿಕುಮಾರ ಪಾರ್ವತಿದೊಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಯಂಕಂಚಿ ಬೈಪಾಸ್ ಬಳಿ ಸಂಶಯಾಸ್ಪದವಾಗಿ ಎರಡು ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಿಚಾರಿಸಿದಾಗ ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧ ಕಡೆಗೆ ಕಳ್ಳತನ ಮಾಡಿದ್ದಾಗಿ ತಿಳಿಸಿದ್ದಾರೆ. ಸದ್ಯ ಪೊಲೀಸರು 16 ಲಕ್ಷದ 65 ಸಾವಿರ ಮೌಲ್ಯದ 37 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: