Uncategorized

‘ಗಣ’ ಚಿತ್ರದ ಹಾಡಿನಲ್ಲಿ ಪ್ರಜ್ವಲ್ ರೊಮ್ಯಾನ್ಸ್

Share

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ನಾಯಕರಾಗಿ ನಟಿಸಿರುವ ‘ಗಣ’ (Gana) ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ ‘she is in love’ ಎಂಬ ರೊಮ್ಯಾಂಟಿಕ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಇಂಪಾಗಿ ಹಾಡಿದ್ದಾರೆ.
ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ (Yash Shivakumar) ಹೆಜ್ಜೆ ಹಾಕಿದ್ದಾರೆ. ಈ ಸುಮಧುರ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.
ಚೆರಿ ಕ್ರಿಯೇಷನ್ಸ್ ಲಾಂಛನದಲ್ಲಿ ಪಾರ್ಥು ಅವರು ನಿರ್ಮಿಸಿರುವ ಈ ಚಿತ್ರವನ್ನು ಹರಿಪ್ರಸಾದ್ ಜಕ್ಕ (Hariprasad Jakka) ನಿರ್ದೇಶಿಸಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಹರೀಶ್ ಕೊಮ್ಮೆ ಸಂಕಲನ , ಸತೀಶ್ ಎ ಕಲಾ ನಿರ್ದೇಶನ ಹಾಗೂ ಡಿ.ಜೆ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಶ್ರೀನಿವಾಸ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಪ್ರಜ್ವಲ್ ದೇವರಾಜ್, ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ಗಣ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: