hubbali

ಹೊರಗುತ್ತಿಗೆ ನೌಕರರನ್ನು ವಜಾಗೊಳಿಸಿರುವುದನ್ನ ಖಂಡಿಸಿ ಪ್ರತಿಭಟನೆ

Share

ಉತ್ತರ ಕರ್ನಾಟಕದ ಸಂಜೀವಿನಿ ಕಿಮ್ಸ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ೧೩೯ ಹೊರಗುತ್ತಿಗೆ ನೌಕರರನ್ನು ಏಕಾಏಕಿಯಾಗಿ ಕೆಲಸದಿಂದ ವಜಾ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ವಜಾಗೊಂಡ ಕೆಲಸಗಾರರನ್ನು ಮರು ನೇಮಕ ಮಾಡಬೇಕೆಂದು ಒತ್ತಾಯಿಸಿ ಕರುನಾಡು ವಿಜಯಸೇನೆ ವತಿಯಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಯಿತು.

 

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಡಾ. ಅಂಬೇಡ್ಕರ್ ವೃತ್ತದಿಂದ. ಧಾರವಾಡದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಮುಖಾಂತರ ಮನವಿ ಸಲ್ಲಿಸಲಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ಮುಖಂಡರಾದ ಮುತ್ತಣ್ಣ ಶಿವಳ್ಳಿ, ಕಳೆದ ೧೫ ವರ್ಷಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತಗೆದುಹಾಕಿದ್ದು, ಬೇರೆ ನೌಕರರನ್ನು ಹೋಂ ಗಾರ್ಡ್ ಕೆಲಸಕ್ಕೆ ತಗೆದುಕೊಂಡಿದ್ದಾದರೆ. ಆದರೇ ಸೆಕ್ಯೂರಿಟಿ ‌ಕೆಲಸದಿಂದ ವಜಾಗೊಳಿಸಿದವರನ್ನು ಹೋಂ ಗಾರ್ಡ್ ಹುದ್ದೆಗೆ ಮರು ನೇಮಕ ಮಾಡಿಕೊಳ್ಳಬೇಕು ಇದರಿಂದ ವಜಾಗೊಂಡ ನೌಕರರಿಗೆ ನ್ಯಾಯ ಸಿಗುತ್ತೆ ಎಂದು ಹೇಳಿದರು.

ಒಂದು ವಾರದವರೆಗೆ ಕಾದು ನೋಡುತ್ತೇವೆ. ಕೆಲಸಕ್ಕೆ ತಗೆದುಕೊಳ್ಳದಿದ್ದರ ಆರೋಗ್ಯ ಸಚಿವ ಡಾ. ಸುಧಾಕರ ಅವರ ನಿವಾಸದ ಮುಂದೆ ವಜಾಗೊಂಡ ನೌಕರರ ಜೊತೆ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

 

ಈ ಸಂದರ್ಭದಲ್ಲಿ ಕರುನಾಡು ವಿಜಯಸೇನೆ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು.

Tags: