ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ ಅವರ ಜನ್ಮದಿನಾಚರಣೆ ಅಂಗವಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಪ್ರತಿಭಾ ಪುರಸ್ಕಾರ ಅಂಗವಾಗಿ, ಇಂದು ರಾಯಬಾಗ ನಗರದಲ್ಲಿ ಹಮ್ಮಿಕೊಂಡ “ರಾಯಬಾಗ ಹ್ಯಾಜ್ ಟ್ಯಾಲೆಂಟ್” ಕಾರ್ಯಕ್ರಮಕ್ಕೆ ರಾಯಬಾಗ ಶಾಸಕ ದುರ್ಯೋದನ ಐಹೊಳೆ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಕಬ್ಬೂರಿನ ಶ್ರೀ ಗೌರಿಶಂಕರ ಮಠದ ಪೂಜ್ಯರಾದ ಶ್ರೀ ರೇವಣಸಿದ್ಧ ಶಿವಾಚಾರ್ಯ ಮಹಾಸ್ವಾಮಿಗಳು, ಭೆಂಡವಾಡ ವಿರಕ್ತಮಠದ ಪೂಜ್ಯರಾದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು, ಬಾವನ ಸೌದತ್ತಿಯ ಶ್ರೀ ಶಿವಶಂಕರ ಸ್ವಾಮೀಜಿಗಳು, ನಂದಿಕುರಳಿಯ ಪಂಚಲಿಂಗೇಶ್ವರ ಮಠದ ವೀರಭದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಸಂಸದರಾದ ಅಣ್ಣಾಹಾಹೇಬ್ ಜೊಲ್ಲೆ, ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.