Uncategorized

ವಿದ್ಯಾರ್ಥಿಗಳ ಭವಿಷ್ಯದ “ಶಕ್ತಿ” ಕಳೆದ ಯೋಜನೆ : ಬಸ್‌ಗಾಗಿ ಮಕ್ಕಳ ಪರದಾಟ..!

Share

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ರಾಜ್ಯದ ಮಹಿಳೆಯರ ಮನ ಗೆದ್ದಿದೆ. ಆದರೆ, ಈ ಯೋಜನೆಯ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಶಕ್ತಿಯೋಜನೆ ಯಿಂದ ಸರ್ಕಾರಿ ಬಸ್‌ ಗಳು ಸರಿಯಾದ ಸಮಯಕ್ಕೆ ಬಾರದ ಶಾಲಾ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬಸ್‌ಗಳ ಬಾಗಿಲಲ್ಲಿ ಜೋತುಬಿದ್ದು ಅಪಾಯಕಾರಿಯಾಗಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಪರಿಸ್ಥಿತಿಗಳನ್ನು ನೋಡಿಯೂ ಸಹ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.
ಶಾಲಾ–ಕಾಲೇಜುಗಳಿಗೆ ತೆರಳುವ ಸಮಯಕ್ಕೆ ಬಸ್‌ ಬರುತ್ತಿಲ್ಲ. ಬೆಳಿಗ್ಗೆ ಮತ್ತು ಸಂಜೆ ಅವಧಿಯಲ್ಲಿ ಬರುವ ಯಾವುದಾದರೊಂದು ಬಸ್‌ ಗೆ ವಿಪರೀತವಾಗಿ ಜನ ತುಂಬಿರುತ್ತಾರೆ. ಬಸ್‌ ನಲ್ಲಿ ಜಾಗ ಸಿಗದೆ ತರಗತಿಗಳನ್ನು ತಪ್ಪಿಸಿಕೊಂಡು ಶಿಕ್ಷಕರಿಂದ ಬೈಯಿಸಿಕೊಳ್ಳುವ ಘಟನೆಗಳು ಸಾಮಾನ್ಯವಾಗಿವೆ. ಅದರಲ್ಲೂ ಸಂಜೆ ವೇಳೆ ಬಸ್‌ ಸಂಖ್ಯೆ ಕಡಿಮೆಯಾಗಿರುವ ಕಾರಣ ವಿದ್ಯಾರ್ಥಿನಿಯರು ನಿಲ್ಲಲು ಜಾಗವಿಲ್ಲದೆ ಇದ್ದರು ಸಹ ಜೋತು ಬಿದ್ದು ಮನೆಗೆ ಹೋಗುವ ಅನಿವಾರ್ಯತೆ ಉಂಟಾಗಿದೆ

ಬಸ್‌ ಗಳಿಗೆ ಬಾಗಿಲುಗಳು ಇದ್ದರೂ, ಪದೇ ಪದೇ ತೆರೆದು ಮುಚ್ಚಬೇಕು ಎನ್ನುವ ಕಾರಣಕ್ಕೆ ಬಾಗಿಲನ್ನು ಮಡಚಿ ಬಿಟ್ಟಿರುತ್ತಾರೆ. ಇದರಿಂದ ಸಲೀಸಾಗಿ ಪ್ರಯಾಣಿಕರು ಹತ್ತಿ ಇಳಿಯಲು ಅನುಕೂಲವಿದೆ. ಆದರೆ, ಜೋತುಬಿದ್ದು ಪ್ರಯಾಣಿಸುವಾಗ ಬಸ್‌ ನಿಂದ ಆಯತಪ್ಪಿ ಬಿದ್ದರೆ, ನೇರವಾಗಿ ಹೊರಗೆ ಬಂದು ಬೀಳುವ ಸಾಧ್ಯತೆಗಳಿವೆ.

Tags: