Uncategorized

Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

Share

ಪ್ರಶ್ನೆಗಾಗಿ ಕಾಸು (Cash for Query) ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿದ್ದು, ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ

ನವದೆಹಲಿ: ಪ್ರಶ್ನೆಗಾಗಿ ಕಾಸು (Cash for Query) ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿದ್ದು, ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

ಗುರುವಾರ ಸಂಸತ್ತಿನ ನೈತಿಕ ಸಮಿತಿಯ ಮುಂದೆ ಅಫಿಡವಿಟ್ ಸಲ್ಲಿಸಿರುವ ಅವರು ಮಹುವಾ ಮೊಯಿತ್ರಾ ಪರವಾಗಿ ಪ್ರಶ್ನೆ ಪೋಸ್ಟ್‌ ಮಾಡಲು ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ನೀಡಿದ್ದರು ಎಂದು ಉಲ್ಲೇಖಿಸಿದ್ದಾರೆ.

ಟಿಎಂಸಿಯ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪ ಮಾಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ

ಸ್ನೇಹಿತರ ಸಲಹೆಯ ಮೇರೆಗೆ ರಾಷ್ಟ್ರಮಟ್ಟದಲ್ಲಿ ಬಹಳ ಬೇಗ ಹೆಸರು ಗಳಿಸಲು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ದುಬಾರಿ ಐಷಾರಾಮಿ ವಸ್ತುಗಳನ್ನು ಉಡುಗೊರೆ, ಬಂಗಲೆಯ ನವೀಕರಣಕ್ಕೆ ಸಹಾಯ, ರಜಾ ದಿನಗಳ ಪ್ರಯಾಣ ವೆಚ್ಚ ಸೇರಿದಂತೆ ಮಹುವಾ ಮೊಯಿತ್ರಾ ನನಗೆ ಪದೇ ಪದೇ ಈಡೇರಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು ಮತ್ತು ಹಲವಾರು ಅನುಕೂಲಗಳನ್ನು ಕೇಳುತ್ತಿದ್ದರು. ಅಷ್ಟೇ ಅಲ್ಲದೇ ತನ್ನ ಪರವಾಗಿ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಎಂದು ಉಲ್ಲೇಖಿಸಿದ್ದಾರೆ.

ದರ್ಶನ್ ಹಿರಾನಂದಾನಿ ಅಫಿಡವಿಟ್‌ ಸಲ್ಲಿಸಿದ ಬೆನ್ನಲ್ಲೇ ಮಹುವಾ ಮೊಯಿತ್ರಾ ಪ್ರತಿಕ್ರಿಯಿಸಿದ್ದಾರೆ. ಸಿಬಿಐ ಮತ್ತು ನೈತಿಕ ಸಮಿತಿಯ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ) ಸದಸ್ಯರು ನನ್ನನ್ನು ಕರೆದರೆ ಮತ್ತು ಕೇಳಿದಾಗ ಉತ್ತರಿಸಲು ನಾನು ಸಿದ್ದನಿದ್ದೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ,ಆಸಕ್ತಿ ಇಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Tags: