Crime

ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿ

Share

ವ್ಯಕ್ತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ವಿಜಯಪುರ ತಾಲ್ಲೂಕಿನ ಅತ್ತಾಲಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜು ಗರುಡ್ಕರ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ.

 

ದುಷ್ಕರ್ಮಿಗಳು ಏಕಾಏಕಿ ರಾಜು ಮೇಲೆ ಹರಿತವಾದ ಆಯುಧದಿಂದ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾರೆ. ಹತ್ಯೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Tags: