ರಾಮ ರಾಜಕೀಯ ವಸ್ತುವಾಗಿಲ್ಲ ಇಂಥ ನಡವಳಿಕೆ ಸರಿಯಲ್ಲಾ, ಶ್ರೀರಾಮ ಮಂದಿರ ವ್ಯಾಜ್ಯ ಹುಟ್ಟಿಕೊಂಡಿದ್ದು 500 ವರ್ಷಗಳ ಹಿಂದೆ, ಸ್ವಾತಂತ್ರ್ಯ ಬಂದು 75 ವರ್ಷಗಳಾಯಿತು ಎಂದು ಯಡುಪಿಯ ಪೇಜಾವರ ಶ್ರೀಗಳು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ರಾಮಮಂದಿರ ಉದ್ಘಾಟನೆಗೆ ನಮಗೆ ಆಹ್ವಾನ ಇಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ನಗರದಲ್ಲಿ ಮಾತನಾಡಿ ದೇಶದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಸರ್ಕಾರ ಮಾಡಿದ್ದು ಯಾರು ಎಂದು ಪ್ರಶ್ನಿಸಿದರು. ಶ್ರೀರಾಮ ಮಂದಿರ ಮಾಡಿಕೊಡಿ ಎಂದು ಅವರ ಬಳಿ ಹಲವಾರು ಬಾರಿ ಕೇಳಲಾಗಿತ್ತು. ತಾವು ಮಾಡಲ್ಲ ಯಾರಾದರೂ ಮಾಡಿದರೆ ಕಳೆದಕ್ಕೂ ಅಡ್ಡಗಾಲು ಹಾಕುತ್ತಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಗುಡುಗಿದರು. ವಿವಾದಿತ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಅವಕಾಶ ಕೊಟ್ಟಿದ್ದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂಬ ಕಾಂಗ್ರೆಸ್ಸಿಗರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಅದರಿಂದ ಏನು ಇವಾಗ ಎಂದ ಶ್ರೀಗಳು ಪ್ರಶ್ನಿಸಿದರು. ರಾಮ ರಾಜ್ಯ ಮಾಡದೆ ಇರೋ ಅಪವಾದವನ್ನು ಅವರು ಹಂಚಿಕೊಳ್ಳಲು ತಯಾರಿದ್ದಾರಾ? ಲಾಭ ಇದ್ದರೆ ನಮಗೆ ತಪ್ಪುಗಳಿದ್ದರೆ ಅವರಿಗೆ ಮಾತ್ರ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇಲ್ಲಿ ರಾಜಕೀಯ ಯಾರು ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಾಗಿ ಶ್ರೀರಾಮ ಮಂದಿರ ಉದ್ಘಾಟನೆ ಮಾಡಲಾಗುತ್ತಿದೆ ಎಂಬ ವಿಚಾರದಲ್ಲಿ ಪ್ರತಿಕ್ರಿಯಿಸಿ ಲೋಕಸಭೆ ವಿಧಾನಸಭಾ ಚುನಾವಣೆ ಇರಬಹುದು ಆದರೆ ಅವುಗಳ ಅಧಿಕಾರ ಅವಧಿ ಐದು ವರ್ಷ ಮಾತ್ರ, ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರಾಮಮಂದಿರ ಉದ್ಘಾಟನೆ ಮಾಡುತ್ತಾರೆ ಎಂಬ ಮಾತನ್ನು ತಪ್ಪಿಸಿಕೊಳ್ಳುವ ಸಮಯ ಯಾವಾಗ ಹೇಳಿ ಎಂದು ತಿರುಗೇಟು ನೀಡಿದರು. ಮಂದಿರ ನಿರ್ಮಾಣವನ್ನು ಯಾವುದೇ ಪರಿಸ್ಥಿತಿಯಲ್ಲಿ ತಡೆಯಬೇಕೆಂಬ ಹುನ್ನಾರ ಇದು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಪೇಜಾವರ ಸ್ವಾಮೀಜಿ ತಿಳಿಸಿದರು.


