Belagavi

ವಿಟಿಯುದಲ್ಲಿ ಯುವ ಸೌರಭ ಕಾರ್ಯಕ್ರಮಕ್ಕೆ ಡಿಸಿಪಿ ಪಿ.ವ್ಹಿ.ಸ್ನೇಹಾ ಚಾಲನೆ

Share

ಬೆಳಗಾವಿಯಲ್ಲಿ ಆಯೋಜಿಸಿದ್ದ ಯುವ ಸೌರಭ- 2022ರ ಕಾರ್ಯಕ್ರಮವನ್ನು ಡಿಸಿಪಿ ಪಿ.ವ್ಹಿ.ಸ್ನೇಹಾ ಅವರು ಉದ್ಘಾಟಿಸಿದರು.

ಬುಧವಾರ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಪಿಜೆ ಅಬ್ದುಲ್ ಕಲಾಂ ಅಡಿಟೋರಿಯಂ ಹಾಲ್‍ನಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಟಿಯು ವತಿಯಿಂದ ಯುವ ಪ್ರತಿಭೆಗಳ ಅಲೆ ಅನಾವರಣ ಯುವ ಸೌರಭ-2022ರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಡಿಸಿಪಿ ಪಿ.ವ್ಹಿ.ಸ್ನೇಹಾ ಅವರು ಮಾತನಾಡಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು.

ಇದರಿಂದ ವಿದ್ಯಾರ್ಥಿಗಳಿಗೆ ಅರಿವು ಮೂಡುತ್ತದೆ ಎಂದು ಹೇಳಿ ಮಾದಕ ವಸ್ತುಗಳಿಂದ ಆಗುವ ಹಾನಿ ಬಗ್ಗೆ ವಿಸ್ತಾರವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿಟಿಯು ಕುಲಪತಿ ಡಾ.ಎಸ್.ವಿದ್ಯಾಶಂಕರ, ಡಾ.ಪ್ರಹ್ಲಾದ ರಾಠೋಡ, ಬಿ.ಇ.ರಂಗಸ್ವಾಮಿ, ಎಂ.ಎ.ಸ್ವಪ್ನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿ ಇನ್ನಿತರ ಗಣ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Tags: