ಇಡೀ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಪ್ರದೇಶ ಮತ್ತಿತರ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಭಾರತೀಯ ಜನತಾ ಪಕ್ಷದ ಶಕ್ತಿ ಏನು ಎಂಬುದು ತಿಳಿಯಲಿದೆ ಎಂದರು.
ಮುಂದಿನ ಮುಖ್ಯಮಂತ್ರಿ ಯಾರಗಬೇಕೆಂಬ ಕುರಿತಂತೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಪರಸ್ಪರ ಪೈಪೋಟಿಯಿದೆ, ಇದು ಬರೀ ಭ್ರಮೆ ಎಂಬುದು ಅವರಿಗೆ ಗೊತ್ತಿಲ್ಲ ಎಂದು ಶೆಟ್ಟರ್ ಹೇಳಿದರು.
ಕಾಂಗ್ರೆಸ್ ಸೇರ್ಪಡೆಯಾಗುವವರು ಯಾರೂ ಇಲ್ಲ. ಸುಮ್ಮನೆ ಈ ರೀತಿ ಸುದ್ದಿ ಹರಡುವ ಮೂಲಕ ಕಾಂಗ್ರೆಸ್ ತನ್ನ ಮರ್ಯಾದೆಯನ್ನು ತಾನೇ ಕಳೆದುಕೊಳ್ಳುತ್ತಿದೆ ಎಂದ ಅವರು ನುಡಿದರು.
ಹು-ಧಾ ಮಹಾನಗರ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಮೀಸಲಾತಿ ನಿಗದಿಯಾದ ನಂತರವೇ ನಿರ್ಧರಿತವಾಗಲಿದೆ ಎಂದು ಅವರು ಹೇಳಿದರು.