Uncategorized

ನಾಳೆ ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್‍ನಿಂದ ಅಂತಿಮ ತೀರ್ಪು: ಬೆಳಗಾವಿ ಜಿಲ್ಲೆಯಾದ್ಯಂತ ಸೆಕ್ಷನ್ 144ಜಾರಿ

Share

ಕರ್ನಾಟಕ ಮಾನ್ಯ ಉಚ್ಛ ನ್ಯಾಯಾಲಯವು ನಾಳೆ ಮಂಗಳವಾರ ಹಿಜಾಬ್ ಕುರಿತಂತೆ ಅಂತಿಮ ತೀರ್ಪನ್ನು ಪ್ರಕಟಿಸುತ್ತಿದ್ದು ಬೆಳಗಾವಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ.

ಹೌದು ನಾಳೆ ಮಾನ್ಯ ಉಚ್ಛ ನ್ಯಾಯಾಲಯವು ಹಿಜಾಬ್ ಕುರಿತಂತೆ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಲಿದೆ. ಈ ವೇಳೆ ಜನರು ಒಂದುಗೂಡುವ ಸಂಭ್ರಮಾಚರಣೆ, ಪ್ರತಿಭಟನೆಗಳು, ಹಾಗೂ ಪಟಾಕಿ ಸಿಡಿಸುವ, ಹಾಗೂ ಅಹಿತಕರ ಘಟನೆಗಳು ಜರುಗುವ ಸಂಭವವಿರುತ್ತದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸಿಆರ್‍ಪಿಸಿ 1973ಅಡಿ ಕಲಂ 144 ನಿಷೇದಾಜ್ಞೆಯನ್ನು ದಿನಾಂಕ 15.3.2022 ರಂದು ಬೆಳಿಗ್ಗೆ 6ಗಂಟೆಯಿಂದ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಈ ಮೂಲಕ ಆದೇಶಿಸಿದ್ದಾರೆ. ಇನ್ನು ಈ ಆದೇಶ ಜಿಲ್ಲಾಧಿಕಾರಿಗಳ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ.

Tags: