ಬೆಳಗಾವಿ ಕಮಿಶನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವೆಗಳನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಿಲಾದ ಕಾನೂನು ಸೇವಾ ಕೇಂದ್ರಗಳಿಗೆ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶರಾದ ಸಿ.ವಿ ಜೋಶಿ ಚಾಲನೆ ನೀಡಿದರು. ನಗರದ ಉದ್ಯಮಬಾಗ್ ಪೊಲೀಸ್ ಠಾಣೆಯಲ್ಲಿ ಈ ಕಾನೂನುಗಳ ಸೇವಾ ಕೇಂದ್ರಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ಬರೆಳಗಾವಿ ಕಮಿಶನರೇಟ್ ವ್ಯಾಪ್ತಿಯಲ್ಲಿನ ಎಲ್ಲಾ ಪೊಲೀಶ್ ಠಾಣೆಗಳಲ್ಲಿ ಕಾನೂನು ಸಲಹೆಗಳನ್ನು ನೀಡುವ ಉದ್ದೇಶದಿಂದ ಪ್ರಾರಂಭಿಸಲಾದ ಕಾನೂನು ಸೇವಾ ಕೇಂದ್ರಗಳ ಉದ್ಘಾಟನೆಯನ್ನು ಜಿಲ್ಲಾ ಸತ್ರ ಹಾಗೂ ಪ್ರಧಾನ ನ್ಯಾಯಾಧೀಶರಾದ ಸಿ.ವಿ ಜೋಶಿ ನೆರವೇರಿಸಿದರು.
ಕಾರ್ಯಕ್ರಮಕ್ಕೆ ಚಾಲನೆಯನ್ನು ನೆರವೇರಿಸಿ ಮಾತನಾಡಿದ ನ್ಯಾಯಮೂರ್ತಿಗಳಾದ ಸಿ.ವಿ ಜೋಶಿರವರು, ಬೆಳಗಾವಿ ಕಮಿಶನರೇಟ್ ವ್ಯಾಪ್ತಿಯಲ್ಲಿ ಕಾನೂನು ಸೇವೆಗಳನ್ನು ನೀಡುವ ಉದ್ದೇಶದಿಂದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭಿಸಿ, ಪ್ರತಿ ಪೊಲೀಸ್ ಠಾಣೆಗೆ ಒಬ್ಬ ವಕೀಲರನ್ನು ನೇಮಕ ಮಾಡಲಾಗಿದೆ.ಪೊಲೀಸ್ ಠಾಣೆಗೆ ಬರುವ ಜನರು ಇವರನ್ನು ಸಂಪರ್ಕ ಮಾಡಿ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲಿ ಎಂಬುದು ಇದರ ಉದ್ದೇಶ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಂತೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಈ ರೀತಿಯ ಕೇಂದ್ರಗಳನ್ನು ಪ್ರಾರಂಂಭಿಸಬೇಕೆಂದಬುದು ಇದರ ಆಶಯವಾಗಿದೆ. ಇನ್ನು ಈ ಮೂಲಕ ಎಲ್ಲರಿಗೂ ವಕೀಲರ ಮೂಲಕ ಕಾನೂನು ಸಹಾಯ ಸಿಗಲಿದೆ. ಹಾಗಾಗಿ ಎಲ್ಲಾ ಸರ್ವಜನಿಕರು ಈ ಸೌಲಭ್ಯವನ್ನು ಪಡೆಯಬೇಕೆಂದು ಮನವಿ ಮಾಡಿದರು.
ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಕಮಿಶನರ್ ಬೋರಲಿಂಗಯ್ಯನವರು ಮಾತನಾಡಿ, ನಾಗರಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಂತೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಈ ರೀತಿಯ ಕೇಂದ್ರಗಳನ್ನು ಪ್ರಾರಂಭಿಸಬೇಕೆಂಬ ಮಾರ್ಗಸೂಚಿ ಇದೆ. ವಿವಿಧ ಪ್ರಕರಣಗಳಲ್ಲಿ ಇಲ್ಲಿಗೆ ಬರುವ ಜನರಿಗೆ ಅದು ಅನುಕೂಲವಾಗಲಿ ಎನ್ನು ದೃಷ್ಟಿಯಿಂದ ಈ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಈ ಹಿನ್ನೆಯಲ್ಲಿ ಜಿಲ್ಲಾ ಸತ್ರ ಮತ್ತು ಪ್ರಧಾನ ನಗ್ಯಾಯಾಧೀಶರಾದ ಸಿ.ವಿ ಜೋಶಿ ರವರು ಉದ್ಯಮಬಾಗ್ ಪೊಲೀಸ್ ಠಾಣೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದ್ದಾರೆ. ಇನ್ನು ಸಾರ್ವಜನಿಕರು ಇದರ ಸದುಪಯೋಗ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಚಂದ್ರಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ದೇವರಾಜ್ ಅರಸ್, ಉದ್ಯಮಬಾಗ್ ಸಿಪಿಐ ಧೀರಜ್ ಶಿಂಧೆ ಮೊದಲಾದವರು ಉಪಸ್ಥಿತರಿದ್ದರು.