ಬೆಳಗಾವಿಯ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು.
ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ದಕ್ಷಿಣ ಮತಕ್ಷೇತ್ರದಲ್ಲಿ ಆಗಬೇಕಾದ ಕಾಮಗಾರಿಗಳನ್ನು ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ವೇಳೆ ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ಆಗಬೇಕಾದ ಕಾಮಗಾರಿಗಳನ್ನು ಕುರಿತಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂದಿನ ಬಜೆಟ್‍ನಲ್ಲಿ ಕ್ಷೇತ್ರದಲ್ಲಿನ ಆಸ್ಪತ್ರೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವ ಕುರಿತು ಅಧಿಕಾರಿಗಳಿಗೆ ಹೇಳಿದರು.
ಮಚ್ಛೆ ಗ್ರಾಮದಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಭೂಮಿ ಹಸ್ತಾಂತರ, ಹಾಗೂ ಯಳ್ಳೂರು ಗ್ರಾಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಪ್ರಸ್ತಾವನೆ ಕುರಿತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಕಾರ್ಮಿಕ ವಿಮಾ ಆಸ್ಪತ್ರೆ ಅಧಿಕಾರಿಗಳು, ಸಮಾಜ ಕಲ್ಯಾಣ, ಕಂದಾಯ, ಭೂದಾಖಲೆಗಳು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಹೆಸ್ಕಾಂ, ಕೊಳಗೇರಿ ಪ್ರದೇಶಾಭಿವೃದ್ಧಿ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.