ಅಂಬೇಡ್ಕರ್ ಭಾವಚಿತ್ರ ತೆರವುಗೊಳಿಸುವಂತೆ ಒತ್ತಾಯಿಸಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ವಿರುದ್ಧ ಬೆಳಗಾವಿ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
೭೩ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೋರ್ಟ್ ಆವರಣದಲ್ಲಿ ಧ್ವಜಾರೋಹಣದ ಸಂದರ್ಭದಲ್ಲಿ ರಾಯಚೂರಿನಲ್ಲಿ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ, ಪೂಜಾ ಕಾರ್ಯಕ್ರಮದಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ರ ಭಾವಚಿತ್ರವನ್ನು ತೆಗೆಯುವಂತೆ ಒತ್ತಾಯಿಸಿ ತೆಗೆಸಿದ್ದಾರೆ. ಇದರಿಂದ ಅವರ ದಲಿತ ವಿರೋಧಿ ಮನೋಧೋರಣೆ ತಿಳಿಯುತ್ತದೆ.
ಹಾಗಾಗಿ ಇಂತಹ ನ್ಯಾಯಾಧೀಶರ ಮೇಲೆ ದೇಶದ್ರೋಹದ ಕಾಯ್ದೆಯನ್ನು ಹೇರಿ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಂಬೇಡ್ಕರ್ ಯುವ ಮಂಚ್ ವತಿಯಿಂದ ಬೆಳಗಾವಿ ನಗರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಗರದ ಅಂಬೇಡ್ಕರ್ ಗಾರ್ಡನ್ನಿಂದ ಜಿಲ್ಲಾದಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ರ್ಯಾಲಿಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಪ್ರತಿಭಟನಾಕಾರರು ಬಾಲಕನೋರ್ವನಿಂದ ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡರವರ ಭಾವಚಿತ್ರದ ಮೇಲೆ ಮೂತ್ರಮ ಮಾಡಿಸಿದರು.